Pages

Sunday, October 26, 2008

ದೀಪಾವಳಿ ಹಾಡುಗಳು !!!

ಸಂಜೆ ದೀಪ ಹಚ್ಚುವಾಗ ಅಮ್ಮ ಹೇಳ್ತಾಯಿದ್ದ ’ರಂಜನಿ’ ರಾಗದಲ್ಲಿರುವ ಈ ಹಾಡು ನನಗೆ ಬಹಳ ಇಷ್ಟ.
ದೀಪಲಕ್ಷ್ಮಿ ದೇವಿ ಜಯ ದೀಪಲಕ್ಷ್ಮಿ
ದೀಪಲಕ್ಷ್ಮಿ ದೇವಿ ಜಯ ದೀಪಲಕ್ಷ್ಮಿ//ಪ//
ಶುಕ್ರವಾರದಲ್ಲಿ ನಿನ್ನ/ ಕೀರ್ತನೆಯಗೈವೆ
ಭಕ್ತಿಯಿಂದ ಬೇಡುವೆ ಮುಕ್ತಿ ಸಂಪದವ ನೀಡೆ //ದೀಪ//



ನಿನ್ನನ್ನೆ ಪಾಡುವೆ ನಿನ್ನನ್ನೆ ಪೊಗಳುವೆ
ನಿನ್ನ ಚರಣ್ದಲ್ಲಿ ಶಿರವನಿಟ್ಟು ನಾ ನಮಿಸುವೆ//೨//
ನಿನ್ನ ಕೃಪೆ ಕಟಾಕ್ಷವು ನನ್ನದಾಗಿ ಬೆಳಗುತಿರಲಿ//ದೀಪ//



ಅಜ್ಞಾನದ ಕತ್ತಲಲ್ಲಿ ಬಳಲಿ ಬೆಂಡಾಗಿಹೆನು
ಸುಜ್ಞಾನದ ಬೆಳಕು ನೀಡಿ ಜೀವನ ಹಸನಾಗಿಸು//೨//
ಅಭಯವ ನೀಡು ಬಾ/ ಕರುಣೆಯ ತೋರು ಬಾ
ಮನಸು/ ನಿನ್ನಲ್ಲಿ/ ನಿಲ್ಲಿಸು/ ತಾಯೇ //ದೀಪ//

ನಮ್ಮ ಕನ್ನಡ ಚಲನಚಿತ್ರಗಳಲ್ಲಿ ಕೆಲವು ದೀಪಾವಳಿ ಹಾಡುಗಳಿವೆ. ಅವುಗಳಲ್ಲಿ ಡಾ. ರಾಜ್ ಮತ್ತು ಹರಿಣಿ ಅಭಿನಯದ "ನಂದಾ ದೀಪ" ಚಿತ್ರದಲ್ಲಿರುವ "ನಾಡಿನಂದಾ ಈ ದೀಪಾವಳಿ ಬಂತು.. ...." ಹಾಡು ನನಗೆ ಬಹಳ ಇಷ್ಟ. ಅಂತರ್ಜಾಲದಲ್ಲಿ ಬಹಳಷ್ಟು ಹುಡುಕಿದರೂ ಈ ಹಾಡು ನನಗೆ ಸಿಗಲಿಲ್ಲ. ನಿಮ್ಮಲ್ಲಿ ಇದ್ದರೆ ನನಗೆ ದಯವಿಟ್ಟು ಈ-ಮೇಲ್ ಮಾಡಿ.

೨೦೦೩ರಲ್ಲಿ ಬಿಡುಗಡೆಯಾದ ’ನಂಜುಂಡಿ’ ಚಲನಚಿತ್ರದಲ್ಲಿರುವ ಈ ಅರ್ಥಪೂರ್ಣ ಹಾಡು ನೋಡಿ . ಸಾಹಿತ್ಯ ಮತ್ತು ಸಂಗೀತ ಹಂಸಲೇಖ ಅವರಿಂದ. ಹಾಡಿರುವವರು ಮಧು ಬಾಲಕೃಷ್ಣ ಮತ್ತು ನಂದಿತ್.

ದೀಪದಿಂದ ದೀಪವ

ಹಚ್ಚಬೇಕು ಮಾನವ

ಪ್ರೀತಿಯಿಂದ ಪ್ರೀತಿ ಹಂಚಲು

ಮನಸಿನಿಂದ ಮನಸನು

ಬೆಳಗಬೇಕು ಮಾನವ

ಮೇಲು ಕೀಳು ಭೇದ ನಿಲ್ಲಲು

ಭೇದವಿಲ್ಲ ಬೆಂಕಿಗೆ

ದ್ವೇಷವಿಲ್ಲ ಬೆಳಕಿಗೆ

ನೀ ತಿಳಿಯೋ ಪ

ಆಸೆ ಹಿಂದೆ ದುಃಖವೆಂದರು

ರಾತ್ರಿ ಹಿಂದೆ ಹಗಲು ಎಂದರು

ದ್ವೇಷವೆಂದು ಹೊರೆ ಎಂದರು

ಹಬ್ಬವದಕೆ ಹೆಗಲು ಎಂದರು

ಎರಡು ಮುಖದ

ನಮ್ಮ ಜನುಮದ ವೇಷಾವಳಿತಿಳಿದು

ಹಾಲ್ಬೆಳಕ ಕುಡಿವುದೇ ದೀಪಾವಳಿ ೧

ಮಣ್ಣಿನಿಂದ ಹಣತೆಯಾದರೆ

ಬೀಜದಿಂದ ಎಣ್ಣೆಯಾಯಿತು

ಅರಳೆಯಿಂದ ಬತ್ತಿಯಾದರೆ

ಸುಡುವ ಬೆಂಕಿ ಜ್ಯೋತಿಯಾಯಿತು

ನಂದಿಸುವುದು ತುಂಬ ಸುಲಭವೋ

ಹೇ ಮಾನವ

ಆನಂದಿಸುವುದು ತುಂಬ ಕಠಿಣವೋ

ಹೇ ದಾನವ೨

1 comment:

I was Miss world said...

Nijakkoo sogasaada blog nimmadu by mallinine@yahoo.com